ಮಂದಾರ್ತಿ: ಶ್ರೀ ಕುಲಮಾಹಾಸ್ತ್ರೀ ಮೀನುಗಾರರ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನೆ
ಮಂದಾರ್ತಿ: ಶ್ರೀ ಕುಲಮಾಹಾಸ್ತ್ರೀ ಮೀನುಗಾರರ ವಿ. ಪ್ರಾ. ಸ. ಸಂಘವು ಸಮಾಜದ ಅಭಿವೃದ್ಧಿಗೆ ಪೂರಕವಾಗಲಿದ್ದು, ಮೀನುಗಾರರ ಸಹಕಾರಿ ಸಂಘವು ಮಾದರಿ ಆರ್ಥಿಕ ಸಂಸ್ಥೆಯಾಗಿ ಹೊರಹೊಮ್ಮಲಿ ಎಂದು ನಾಡೋಜ ಡಾ.ಜಿ.ಶಂಕರ್ ಹೇಳಿದರು. ಅವರು ಶುಕ್ರವಾರ ಮಂದಾರ್ತಿ ಶ್ರೀ ಕುಲಮಾಹಾಸ್ತ್ರೀ ಮೀನುಗಾರರ ವಿವಿಧೋದ್ದೇಶ ಪ್ರಾಥಮಿಕ ಸಹಕಾರಿ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರಿ ಸಂಘದ ಭದ್ರತಾ ಕೊಠಡಿಯನ್ನು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಧನಂಜಯ ಶೆಟ್ಟಿ ಹಾಗೂ ಕಂಪ್ಯೂಟರ್ ಅನ್ನು ಉದ್ಯಮಿ ಗಣೇಶ್ ಪ್ರಸಾದ್ ಕಾಂಚನ್ […]
ನೀಲಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಸಂಪನ್ನ
ಮಂದಾರ್ತಿ: ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಬುಧವಾರ ವಿಜಯದಶಮಿಯಂದು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ಮೂಲಕ ವಿಜೃಂಭಣೆಯಿಂದ ಸಂಪನ್ನಗೊಂಡಿತು. ನವರಾತ್ರಿ ಪರ್ಯಂತ ದಿನಂಪ್ರತಿ ದುರ್ಗಾ ಹೋಮ, ಅನ್ನಸಂತರ್ಪಣೆ ನಡೆಯಿತು. ಶುಕ್ರವಾರ ವಿಜಯದಶಮಿಯಂದು ಚಂಡಿಕಾಯಾಗ, ಮಹಾ ಅನ್ನ ಸಂತರ್ಪಣೆ ಮತ್ತು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ನಡೆಯಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ರಘರಾಮ ಮಧ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ಅರ್ಚಕರಾದ ಕೃಷ್ಣ ಅಡಿಗ, ಚಂದ್ರಶೇಖರ […]
ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ
ಮಂದಾರ್ತಿ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಸೆ. 26 ಸೋಮವಾರದಿಂದ ಮೊದಲ್ಗೊಂಡು ಅ.05 ಬುಧವಾರ ಪರ್ಯಂತ ದೇವೀ ಸನ್ನಿಧಿಯಲ್ಲಿ ನವರಾತ್ರಿ ವಿಶೇಷ ಪೂಜಾ ಸಮಾರಂಭವು ನಡೆಯಲಿದ್ದು, ಅ.02 ಆದಿತ್ಯವಾರ ಮೂಲಾ ನಕ್ಷತ್ರ ದಿನದಂದು ಚಂಡಿಕಾಯಾಗವು ಜರಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ತನು- ಮನ- ಧನ- ಧಾನ್ಯಾದಿಗಳಿಂದ ಸಹಕರಿಸಿ, ಶ್ರೀದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ. ಸ್ಥಳವಂದಿಗರ ಪರವಾಗಿ, ಎಸ್.ಸಿ.ಕೊಟಾರಗಸ್ತಿ ಕಾರ್ಯನಿರ್ವಹಣಾಧಿಕಾರಿ ಹೆಚ್. ಧನಂಜಯ ಶೆಟ್ಟಿ ಅಧ್ಯಕ್ಷರು ಹೆಚ್. ಸುರೇಂದ್ರ ಶೆಟ್ಟಿ- […]
ಮಂದಾರ್ತಿ: ಕಾರಿಗೆ ಬೆಂಕಿ ಹಚ್ಚಿಕೊಂಡು ಯುವ ಜೋಡಿ ಆತ್ಮಹತ್ಯೆ ಪ್ರಕರಣ; ಮಕ್ಕಳ ಪ್ರೀತಿಯ ವಿಷಯ ಗೊತ್ತಿಲ್ಲವೆಂದ ಪೋಷಕರು
ಮಂದಾರ್ತಿ: ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಬೆಂಗಳೂರಿನ ಯುವ ಜೋಡಿ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಬಾಡಿಗೆ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ಮಕ್ಕಳ ಹೆತ್ತವರು ಪ್ರತಿಕ್ರಿಯೆ ನೀಡಿದ್ದು, ತಮ್ಮ ಮಕ್ಕಳು ಪ್ರೀತಿಸುತ್ತಿದ್ದ ವಿಷಯ ತಿಳಿದಿರಲಿಲ್ಲ, ಗೊತ್ತಿದ್ದಿದ್ದರೆ ಅವರಿಬ್ಬರಿಗೂ ಮದುವೆ ಮಾಡಿಸುತ್ತಿದ್ದೆವು ಎಂದು ಹೇಳಿದ್ದಾರೆ. 23 ವರ್ಷದ ಯಶವಂತ್ ಯಾದವ್ ವಿ ಮತ್ತು ಜ್ಯೋತಿ ಎಂ ಅವರ ಮೃತದೇಹಗಳು ಭಾನುವಾರ ಮುಂಜಾನೆ ಸುಟ್ಟ ಕಾರಿನೊಳಗೆ ಪತ್ತೆಯಾಗಿತ್ತು. ಬೆಂಗಳೂರಿನ ನಿವಾಸಿಗಳಾದ ಈ ಯುವ ಜೋಡಿ, ಮೇ 18 ರಂದು […]
ಮಂದಾರ್ತಿ: ಧಗಧಗಿಸುತ್ತಿದ್ದ ಕಾರಿನಲ್ಲಿದ್ದದ್ದು ಬೆಂಗಳೂರಿನ ಯುವ ಜೋಡಿ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು?
ಮಂದಾರ್ತಿ: ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಬೆಳ್ಳಂಬೆಳಗ್ಗೆ ಉರಿಯುತ್ತಿದ್ದ ಕಾರಿನಲ್ಲಿ ಜೋಡಿ ಶವಗಳು ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಕೃತ್ಯ ಎಂದು ತನಿಖೆಯಿಂದ ತಿಳಿದು ಬಂದಿದೆ. ಯಶವಂತ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎನ್ನಲಾಗಿದೆ. ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರನ್ನು ಕಂಡು ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ. ಮೃತರು ನಿನ್ನೆ (ಮೇ 21) ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ […]