ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಲಿ ಎಂದು ಕಾವೇರಿ ವಿವಾದದ ಕುರಿತು ಹೇಳಿದ ನಟ ಶಿವರಾಜ್ ಕುಮಾರ್

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ನಡುವೆ ಮಾತುಕತೆ ನಡೆಸಬೇಕು ಎಂದು ನಟ ಡಾ.ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಷ್ಟಕಾಲದ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಮಾತುಕತೆಗೆ ಮುಂದಾಗಬೇಕು. ಎರಡೂ ಸರ್ಕಾರಗಳ ಜತೆ ಮಾತನಾಡಿದರೆ ಸಂಕಷ್ಟ ಬಗೆಹರಿಯಲಿದೆ ಎಂದರು.ಕಾವೇರಿ ವಿವಾದದಲ್ಲಿ […]