ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಾಲೆಯನ್ನೇ ಬದಲಾಯಿಸಿದ್ರು!

ಮಂಡ್ಯ: ಮಂಡ್ಯದ ಆಲಕೆರೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೊಟ್ಟೆ ಕೊಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದಾಗಿನಿಂದ ಈ ಗ್ರಾಮದ ಜನರು, ಶಾಲೆಯಲ್ಲಿ ಮೊಟ್ಟೆ ಕೊಡುವುದು ಬೇಡಾ ಎಂದು ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದರು. ಏಕೆಂದರೆ ಈ ಶಾಲೆ ಇರುವ 100 ಮೀಟರ್ ಅಂತರದಲ್ಲಿ ವೀರಭದ್ರಸ್ವಾಮಿ‌ ದೇವಸ್ಥಾನವಿದೆ. ಹೀಗಾಗಿ, ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಹಾಗೂ ಮೊಟ್ಟೆಯನ್ನು ಸೇವನೆ ಮಾಡಲ್ಲ. ಶಾಲೆಯಲ್ಲೂ ಮೊಟ್ಟೆಯ ಬದಲಿಗೆ ಇಷ್ಟು ದಿನ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ಕೊಡಲಾಗುತ್ತಿತ್ತು. ಗ್ರಾಮಸ್ಥರ ಧಾರ್ಮಿಕ ಭಾವನೆಗೆ ಧಕ್ಕೆ:ಕಳೆದ […]