ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌: ನಾಯಕತ್ವದಲ್ಲಿ ಮಹಿಳೆಯರು ಕುರಿತು ಉಪನ್ಯಾಸ ಕಾರ್ಯಕ್ರಮ

ಮಂಗಳೂರು: ಇಲ್ಲಿನ ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ “ನಾಯಕತ್ವದಲ್ಲಿ ಮಹಿಳೆಯರು – ಅಡೆತಡೆಗಳು ಮತ್ತು ಪಕ್ಷಪಾತವನ್ನು ನಿವಾರಿಸುವುದು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಶ್ರೀಮತಿ ಶಾಂಭವಿ ಭಂಡಾರ್ಕರ್ ಮಹಿಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 250ಕ್ಕೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಶ್ರೀಮತಿ ಪ್ರತಿಜ್ಞಾ ಸುಹಾಸಿನಿ, ಉಪಪ್ರಾಂಶುಪಾಲೆ ಶ್ರೀಮತಿ ಗೀತಾಲಕ್ಷ್ಮಿ ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.