ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]
ಮಂಗಳೂರು: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17 ರವರೆಗೆ ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು […]
ಬೆಳುವಾಯಿ–ಕಾಂತಾವರ ಮಾರ್ಗದಲ್ಲಿ ಗೊಂದಲ; ಬಸ್–ಕಾರು ಮುಖಾಮುಖಿ

ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ […]
ಉದ್ಯೋಗಾವಕಾಶ: ಮೇ 30, ಜೂ.1 ರಂದು ಸಂದರ್ಶನ

ಮಂಗಳೂರು: ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಲಯಾಳಂ/ಹಿಂದಿ/ಇಂಗ್ಲಿಷ್/ತಮಿಳು ಭಾಷೆ ತಿಳಿದಿರಬೇಕು. ಬ್ಲಿಂಕಿಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗೆ […]
ಮಂಗಳೂರು ಕದ್ರಿ ಉದ್ಯಾನವನದಲ್ಲಿ ಮೇ 28ರಿಂದ ಮಾವು ಮೇಳ

ಮಂಗಳೂರು: ರಾಮನಗರ ಜಿಲ್ಲಾ ಮಾವು ಬೆಳೆಗಾರರ ಮಾರಾಟ ಸಂಘ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೇ 28ರಿಂದ 31ರವರೆಗೆ ಕದ್ರಿ ಉದ್ಯಾನವನದಲ್ಲಿKadri Park ನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಲಾದ ವಿವಿಧ ತಳಿಯ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರಲಿವೆ ಎಂದು ತಿಳಿಸಿದರು. ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ ಹಾಗೂ ಬೆಂಗನಪಳ್ಳಿ ಶುಗರ್ ಬೇಬಿ ಸೇರಿದಂತೆ ಹಲವು […]