ಮಂಗಳೂರು: ಕರ್ತವ್ಯ ನಿರತ ಮಹಿಳಾ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಬುಧವಾರದಂದು ಕರ್ತವ್ಯದಲ್ಲಿದ್ದ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್ ಪರ್ಮಾರ್ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಜ್ಯೋತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈಕೆಯ ಗಂಡ ಓಂಬೀರ್ […]

ತುಳು ಭಾಷೆಗೆ ಸಂವಿಧಾನಿಕ ಮಾನ್ಯತೆಗಾಗಿ ಅಕ್ಟೋಬರ್ 10 ರಂದು ಮಿನಿ ವಿಧಾನಸೌಧದೆದುರು ಪ್ರತಿಭಟನೆ

ಮಂಗಳೂರು/ಉಡುಪಿ: ತುಳುನಾಡಿನ ಮತ್ತು ತುಳುವರ ಮಾತೃ ಭಾಷೆ ತುಳುವಿಗೆ ಭಾರತೀಯ ಸಂವಿಧಾನದ 347 ನೇ ವಿಧಿಯ ಪ್ರಕಾರ ಕರ್ನಾಟಕದ ಅಧಿಕೃತ ಭಾಷೆ ಎಂದು ಮಾನ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಕ್ಟೋಬರ್ 10 ರಂದು ಬೆಳಿಗ್ಗೆ 9.30 ಗಂಟೆಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ಭಾರತೀಯ ಸಂವಿಧಾನದ 29 ನೇ ವಿಧಿಯು ವಿಶಿಷ್ಟವಾದ ಭಾಷೆ, ಲಿಪಿ ಅಥವಾ ಸಂಸ್ಕೃತಿಯನ್ನು ಹೊಂದಿರುವ ನಾಗರಿಕರ ಒಂದು ವಿಭಾಗವು ಅದನ್ನು ಸಂರಕ್ಷಿಸುವ ಹಕ್ಕನ್ನು ಹೊಂದಿದೆ ಎಂದು ಹೇಳಿದೆ. ತುಳುವಿಗೆ ತನ್ನದೇ […]

ಕರಾವಳಿಗರಿಗೆ ಕುಚ್ಚಲಕ್ಕಿ ಭಾಗ್ಯ: ಪಡಿತರ ವಿತರಣೆಗೆ ಕೇಂದ್ರ ಅಸ್ತು

ಮಂಗಳೂರು/ ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುವ ಮತ್ತು ಇಲ್ಲಿನ ಜನತೆ ಬಹುವಾಗಿ ಇಷ್ಟಪಟ್ಟು ಸೇವಿಸುವ ಕುಚ್ಚಲಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸುವ ಸಾರ್ವಜನಿಕರ ಬೇಡಿಕೆಯ ಬಗ್ಗೆ ಕೇಂದ್ರ ಆಹಾರ ಮತ್ತು […]

ಮಂಗಳೂರು: ಜಿ.ಪಂ ಘನ ದ್ರವ ತ್ಯಾಜ್ಯ ನಿರ್ವಹಣೆ ಜಿಲ್ಲಾ ಸಲಹೆಗಾರ ಹುದ್ದೆ ಖಾಲಿ

ವಿಭಾಗ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆ: ಘನ ದ್ರವ ತ್ಯಾಜ್ಯ ನಿರ್ವಹಣೆ ಜಿಲ್ಲಾ ಸಲಹೆಗಾರ (ಗುತ್ತಿಗೆ ಆಧಾರ) ವಿದ್ಯಾರ್ಹತೆ: ಎನ್ವಿರಾನ್‌ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಪದವಿ/ಸ್ನಾತಕೋತ್ತರ ಪದವಿ ಹೊಸಬರು ಅಥವಾ ಅನುಭವ ಇರುವವ ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವೇತನ: 25 ಸಾವಿರ ಕೆಲಸದ ಸ್ಥಳ: ಮಂಗಳೂರು ಆಸಕ್ತ ಅಭ್ಯರ್ಥಿಗಳು ಸಿವಿ : 9964242943 ಗೆ ವಾಟ್ಸಾಪ್ ಮಾಡಬಹುದು  

ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಕರಾವಳಿ ಉತ್ಸವ

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಕರಾವಳಿ ಉತ್ಸವವನ್ನು ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಆಯೋಜಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಮತ್ತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದ ಸುಗಮ ನಿರ್ವಹಣೆಗೆ ವಿವಿಧ ಸಮಿತಿಗಳು ಹಾಗೂ ಉಪಸಮಿತಿಗಳನ್ನು ಶೀಘ್ರ ರಚಿಸಲಾಗುವುದು ಎಂದರು. ಈ ಪ್ರದೇಶದ […]