ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸಿಗಬೇಕು: ಡಾ.ಪದ್ಮಿನಿ ಪ್ರಸಾದ್

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಇದ್ದರೆ ಉಳಿದ್ದೆಲ್ಲವೂ ತಾನಾಗಿಯೇ ಬರುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸಿಗಬೇಕು. ಕಾಯಿಲೆಗೆ ಪ್ರಾರಂಭದ ಹಂತದಲ್ಲೇ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಟ್ಟರೆ ಮುಂಬರುವ ದೊಡ್ಡಮಟ್ಟದ ತೊಂದರೆಗಳನ್ನು ತಪ್ಪಿಸಬಹುದು ಎಂದು ಭರವಸೆ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷೆ ಹಾಗೂ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೇಳಿದರು. ಭಾನುವಾರದಂದು ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ಆಶ್ರಯದಲ್ಲಿ ಭರವಸೆ ಚಾರಿಟೆಬಲ್ ಫೌಂಡೇಶನ್ ಬೆಂಗಳೂರು ವತಿಯಿಂದ ಶ್ರೀ ಗೋಕರ್ಣನಾಥ ಕಾಲೇಜು ಸಭಾಂಗಣದಲ್ಲಿ ಉಚಿತ ಬೃಹತ್ ಆರೋಗ್ಯ ಮೇಳದ […]
ಮಂಗಳೂರು: ಬಲವಂತದ ಮತಾಂತರ ಪ್ರಕರಣ; ಮೂವರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಬಾಲಕಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ಮಹಿಳಾ ವೈದ್ಯೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಶಿವಾನಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಖಲೀಲ್, ಡಾ ಜಮೀಲಾ ಮತ್ತು ಐಮನ್ ವಿರುದ್ಧ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯ್ದೆ 2022 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, ಶಿವಾನಿ ಖಲೀಲ್ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ತನ್ನ ಮೊಬೈಲ್ ಫೋನ್ ರೀಚಾರ್ಜ್ ಮಾಡುತ್ತಿದ್ದಳು. […]
ಎಂಸಿಸಿ ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ ಸಂಭ್ರಮದ ಅದ್ದೂರಿ ಕಾರ್ಯಕ್ರಮ

ಮಂಗಳೂರು: ಎಂಸಿಸಿ ಬ್ಯಾಂಕ್ ನ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ಭಾನುವಾರದಂದು ಮಂಗಳೂರಿನ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಿತು. ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ದೀಪಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂಸಿಸಿ ಸಂಸ್ಥಾಪಕ ಪಿ.ಎಫ್.ಎಕ್ಸ್ ಸಲ್ಡಾನ ಇವರ ಭಾವಚಿತ್ರಕ್ಕೆ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನೀಲ್ ಲೋಬೊ ಪುಷ್ಪಾರ್ಚಣೆಯನ್ನು ನೆರವೇರಿಸಿದರು. ಮಂಗಳೂರು […]
ಮಂಗಳೂರು ಎಂಸಿಸಿ ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ: ಅಶಕ್ತ ಕುಟುಂಬಗಳಿಗೆ 15 ಲಕ್ಷ ಮೊತ್ತ ದೇಣಿಗೆ

ಮಂಗಳೂರು: ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಶತಮಾನೋತ್ತರ ದಶಮಾನೋತ್ಸವದ ಪ್ರಯುಕ್ತ ಸಮಾಜದ ಅಶಕ್ತ ವರ್ಗದವರ ಚಿಕಿತ್ಸೆ, ಉನ್ನತ ಶಿಕ್ಷಣ, ವಸತಿ ಮತ್ತು ಹೆಣ್ಣು ಮಕ್ಕಳ ಮದುವೆ ವೆಚ್ಚ ಸೇರಿದಂತೆ ಸರಿಸುಮಾರು 90 ಅಶಕ್ತ ಕುಟುಂಬಗಳಿಗೆ 15 ಲಕ್ಷ ಮೊತ್ತದ ದತ್ತಿ ದೇಣಿಗೆ ವಿತರಣಾ ಕಾರ್ಯಕ್ರಮ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಎಂಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನೆರವೇರಿತು. ಜೆಪ್ಪು ಸೆಮಿನರಿಯ ಆಡಳಿತಾಧಿಕಾರಿ, ಪ್ರೊಫೆಸರ್ ಫಾ. ನವೀನ್ ಪಿಂಟೊ ದೀಪಬೆಳಗಿ […]
ಮಂಗಳೂರು: ಜನವಸತಿ ಇಲ್ಲದ ಮನೆ ಮುಂದೆ ಮಾನವ ಅಸ್ಥಿಪಂಜರ ಪತ್ತೆ

ಮಂಗಳೂರು: ಜನವಸತಿ ಇಲ್ಲದೆ ಮುಚ್ಚಲಾಗಿದ್ದ ಮನೆಯ ಮುಂದುಗಡೆ ವ್ಯಕ್ತಿಯೊಬ್ಬರ ಅಸ್ಥಿಪಂಜರ ನ.25 ರಂದು ಪತ್ತೆಯಾಗಿದೆ. ನಗರದ ಮಣ್ಣಗುಡ್ಡದ ಹೋಟೆಲ್ ದುರ್ಗಾ ಮಹಲ್ ಎದುರಿನ ರಸ್ತೆಯಲ್ಲಿರುವ ಮನೆಯ ಮುಂದುಗಡೆ ಈ ಅಸ್ಥಿಪಂಜರ ಪತ್ತೆಯಾಗಿದೆ. ವಿಷಯ ತಿಳಿದ ತಕ್ಷಣ ಬರ್ಕೆ ಪೊಲೀಸರು ಘಟನಾ ಸ್ಥಳಕ್ಕೆ ಬಂದು ನಿರೀಕ್ಷಣೆ ನಡೆಸಿದ್ದಾರೆ. ಈ ಮನೆಯಲ್ಲಿ ಹಲವು ಕಾಲಗಳಿಂದ ಯಾರೂ ವಾಸಿಸುತ್ತಿಲ್ಲ ಎನ್ನಲಾಗಿದೆ. ಹೆಚ್ಚಿನ ತನಿಖೆಯಿಂದ ನೈಜ ಮಾಹಿತಿ ಹೊರಬರಲಿದೆ.