21 ಡಿಸಿಸಿ ಬ್ಯಾಂಕ್ ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ಒಂದನೇ ಸ್ಥಾನದಲ್ಲಿದೆ: ಎಸ್.ಟಿ ಸೋಮಶೇಖರ್

ಮಂಗಳೂರು: ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದ್ದು, ಸಹಕಾರ ಕ್ಷೇತ್ರದಲ್ಲಿ ಭಾರತದಲ್ಲಿಯೆ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಇಲ್ಲಿ ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರ ಜೀವಂತವಾಗಿರುವುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ […]
ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಂಗಳೂರು: ಎಬಿವಿಪಿ ವತಿಯಿಂದ ಅಭ್ಯಾಸವರ್ಗ; ನೂತನ ಕಾರ್ಯಕಾರಿಣಿ ಸಮಿತಿ ರಚನೆ

ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗವು ನಗರದ ಸಂಘನಿಕೇತನದ ಸಭಾಂಗಣದಲ್ಲಿ ನವೆಂಬರ್ 11-12 ರಂದು ಜರುಗಿತು. ಅಭ್ಯಾಸ ವರ್ಗವನ್ನು ಇಂಡಿಯನ್ ರೆಡ್ ಕ್ರಾಸ್ ಜಿಲ್ಲಾ ಘಟಕದ ಮುಖ್ಯಸ್ಥ ಸಿಎ ಶಾಂತರಾಮ್ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಥಬೀದಿಯ ಡಾ. ದಯಾನಂದ ಪೈ ಹಾಗೂ ಡಾ.ಸತೀಶ್ ಪೈ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಭಾಗವಹಿಸಿದ್ದರು. ಎಬಿವಿಪಿಯ ಸೈದ್ಧಾಂತಿಕ ಭೂಮಿಕೆ, ಕ್ಯಾಂಪಸ್ ಕಾರ್ಯ, ಕಾರ್ಯಪದ್ಧತಿ ಹಾಗೂ ಶಾಖೆ ಸಂಚಲನೆ […]
ಬಹುಮುಖ ಪ್ರತಿಭೆ ಮುದ್ದು ಮೂಡುಬೆಳ್ಳೆಯವರಿಗೆ ರಂಗ ಚಾವಡಿ 2022 ಪ್ರಶಸ್ತಿ

ಮಂಗಳೂರು: ಪ್ರತಿಷ್ಠಿತ ರಂಗ ಚಾವಡಿ 2022ರ ಪ್ರಶಸ್ತಿಗೆ ಸಾಹಿತಿ, ಜಾನಪದ ವಿದ್ವಾಂಸ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನವಂಬರ್ 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಇವರು ತನ್ನ16 ನೇ ವಯಸ್ಸಿನಿಂದ ಜಾನಪದ ಸಾಹಿತ್ಯದ ಕಡೆಗೆ ಆಕರ್ಷಿತರಾಗಿದ್ದಾರೆ. ಸರಕಾರದ ನ್ಯಾಯಾಂಗ ಹಾಗೂ ಪ್ರಸಾರ ಇಲಾಖೆಯಲ್ಲಿ ಹಾಗೂ ಆಕಾಶವಾಣಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿಯೂ […]
ಮಂಗಳೂರು: ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ಅಭಾವಿಪ ಪ್ರತಿಭಟನೆ

ಮಂಗಳೂರು: ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಹದಗೆಟ್ಟಿದೆ. ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಇನ್ನೂ ದೊರೆತಿಲ್ಲ. ಸರಕಾರವು ಈ ವಿಷಯದ ಕುರಿತು ತುರ್ತು ಗಮನ ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ […]