ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು: ಪ್ರಧಾನಿ ಮೋದಿ ಸೆಪ್ಟೆಂಬರ್ 2, ಶುಕ್ರವಾರದಂದು ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಮಾವೇಶವನ್ನು ಆಯೋಜಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಯೋಜನೆ ಹಾಕಿಕೊಂಡಿದೆ. ಈ […]
ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್ ನಲ್ಲಿ ಒಲಿಂಪಸ್ 2022 ವಾಣಿಜ್ಯ ದಿನಾಚರಣೆ

ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ವತಿಯಿಂದ ಅಂತರ್ ತರಗತಿಯ ‘ವಾಣಿಜ್ಯ ದಿನಾಚರಣೆ – ಒಲಿಂಪಸ್ 2022’ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆ ಶ್ರೀಮತಿ ಯಶಸ್ವಿನಿ ಯಶ್ಪಾಲ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಈ ರೀತಿಯ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಅದರಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ […]
ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ 900 ಕೆ.ಜಿ ಧವಸದಿಂದ ಮೂಡಿಬಂತು ಭಾರತದ ತ್ರಿವರ್ಣ ಧ್ವಜ

ಮಂಗಳೂರು: ಭಾರತದ 75 ನೇ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ದೇಶದ ಪ್ರತಿ ಮನೆ, ಮಠ, ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಎನ್ನುವ ಬೇಧವಿಲ್ಲದೆ ಎಲ್ಲೆಡೆಯೂ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಮಂಗಳೂರಿನ ಬಹು ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಅಂಗಳದಲ್ಲಿ ಕ್ಷೇತ್ರದ ಮತ್ತು ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ 900 ಕೆ.ಜಿ ಧವಸ-ಧಾನ್ಯದಿಂದ ಸುಂದರವಾದ ತ್ರಿವರ್ಣ ಧ್ವಜವನ್ನು ರಚಿಸಲಾಗಿದ್ದು, ಜನರ ಆಕರ್ಷಣೆಯ ಕೇಂದ್ರವಾಗಿದೆ. ವಿಧ-ವಿಧದ ಧವಸ […]
ಮಂಗಳೂರು: ತ್ರಿಶಾ ಕಾಲೇಜ್ ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗಾ ಅಭಿಯಾನ

ಮಂಗಳೂರು: ನಮ್ಮ ದೇಶ ಸ್ವತಂತ್ರಗೊಂಡು 75 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಈ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ‘ಹರ್ ಘರ್ ತಿರಂಗಾ’ ಅಭಿಯಾನವು ರಾಷ್ಟ್ರವ್ಯಾಪಿ ನಡೆಯುತ್ತಿದೆ. ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಎಂಡ್ ಮ್ಯಾನೇಜ್ ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಈ ಅಭಿಯಾನವನ್ನು ಕೈಗೊಂಡರು. ತ್ರಿಶಾ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ನ ವಿದ್ಯಾರ್ಥಿಗಳು ಕುದ್ರೋಳಿ ಹಾಗೂ ಅಳಕೆಯ ಹಲವಾರು […]
ತನ್ನ ಎರಡೂ ಕೈಗಳಿಂದ ಬರೆಯಬಲ್ಲ ಮಂಗಳೂರಿನ ಆದಿ ಸ್ವರೂಪ ಸಾಮರ್ಥ್ಯಕ್ಕೆ ಮೂಗಿನ ಮೇಲೆ ಬೆರಳಿಟ್ಟ ನೆಟ್ಟಿಗರು!

ಮಂಗಳೂರು: ಬಲ ಮತ್ತು ಎಡಗೈಗಳನ್ನು ಏಕಕಾಲದಲ್ಲಿ ಬಳಸಿ ಬರೆಯುವ ವಿಶಿಷ್ಟ ಬಹುಮುಖ ಸಾಮರ್ಥ್ಯ ಹೊಂದಿರುವ ಮಂಗಳೂರಿನ ಆದಿ ಸ್ವರೂಪಾ ವೀಡಿಯೋ ಒಂದನ್ನು ಟ್ವಿಟರ್ ಬಳಕೆದಾರರೊಬ್ಬರು ಮರುಹಂಚಿಕೊಂಡಿದ್ದು, ಇದನ್ನು ನೋಡಿದ ನೆಟ್ಟಿಗರೆಲ್ಲಾ ಮೂಗಿನ ಮೇಲೆ ಬೆರಳಿಟ್ಟುಕೊಂಡು ಆದಿ ಸ್ವರೂಪ ಪ್ರತಿಭೆಯನ್ನು ಮನಸಾರೆ ಕೊಂಡಾಡುತ್ತಿದ್ದಾರೆ. ಸ್ವಯಂ-ಶಿಕ್ಷಣವನ್ನು ಪಡೆದು ತನ್ನ ಈ ಸಾಮರ್ಥ್ಯವನ್ನು ತಾನೇ ನಿರ್ಮಿಸಿಕೊಂಡಿರುವ ಆದಿ ಸ್ವರೂಪಾ ಈಗಾಗಲೇ ಒಂದು ನಿಮಿಷದಲ್ಲಿ ತನ್ನ ಎರಡೂ ಕೈಗಳನ್ನು ಏಕಕಾಲದಲ್ಲಿ ಅತಿ ಹೆಚ್ಚು ಪದಗಳನ್ನು ಬರೆದು ವಿಶ್ವದಾಖಲೆಯನ್ನು ನಿರ್ಮಿಸಿದ್ದಾಳೆ. ಇದರ ಜೊತೆಗೆ, ಆದಿ […]