ಮತ್ತೆ ಮುಳುಗಿತು ಮಂಗಳೂರು: ಅವೈಜ್ಞಾನಿಕ ಕಾಮಗಾರಿಗಳಿಂದ ನದಿಯಂತಾಯ್ತು ಸ್ಮಾರ್ಟ್ ನಗರದ ರಸ್ತೆಗಳು

ಮಂಗಳೂರು: ಪ್ರತಿ ಬಾರಿಯಂತೆಯೆ ಈ ಬಾರಿಯೂ ಮಂಗಳೂರು ನಗರ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸವಾರರು, ಪಾದಚಾರಿಗಳು ದೋಣಿಯ ಸಹಾಯದಿಂದ ಕೆಲಸ ಕಾರ್ಯಗಳಿಗೆ ಹೋಗಬೇಕಾದಂತಹ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಈ ಸ್ಥಿತಿಯು ಸಾಮಾನ್ಯವೆಂಬಾತಾಗಿದ್ದು, ಸ್ಮಾರ್ಟಿ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿರುವ ವಿಶ್ವ ಪ್ರಸಿದ್ದ ಮಂಗಳೂರು ನಗರಕ್ಕೆ ಈ ಸಮಸ್ಯೆಯು ಕಪ್ಪು ಚುಕ್ಕೆಯಂತಾಗಿ ಕಾಡುತ್ತಿದೆ. ಚರಂಡಿ ವ್ಯವಸ್ಥೆಯೇ ಇಲ್ಲದ ಹೆದ್ದಾರಿಗಳು, ಹೊಂಡ ಬಿದ್ದ ರಸ್ತೆಗಳು, ಅವೈಜ್ಞಾನಿಕ ಕಾಮಗಾರಿಗಳು, ನೀರಿನ ಹರಿವು ಸರಾಗವಾಗಲು ಮಳೆಗಾಲಕ್ಕೂ ಮುನ್ನ ಚರಂಡಿಗಳನ್ನು ಸ್ವಚ್ಛಗೊಳಿಸಿ ಕ್ರಮ […]
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಕಟ್ಟೆಚ್ಚರ ವಹಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು/ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸಂಭಾವ್ಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲ ಮಕ್ಕಳ ಬಗ್ಗೆ ನಿಗಾ ವಹಿಸಿವಂತೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದಾರೆ. ಶಾಲೆಗೆ ಹಾಜರಾಗಲು ತೊಂದರೆಯಾಗುವಂತಹ ಪ್ರದೇಶಗಳಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಹಾಜರಾಗಿರುವ ವಿದ್ಯಾರ್ಥಿಗಳಿಗೆ ಪಾಠ ಮುಂದುವರಿಸಲು ಸೂಚಿಸಲಾಗಿದೆ.
ರಾಷ್ಟ್ರದ ಅಭಿವೃದ್ದಿ ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ: ಪ್ರೊ. ನರೇಂದ್ರ.ಎಲ್.ನಾಯಕ್

ಮಂಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ನಿಖರವಾದ ಗುರಿಯನ್ನುಹೊಂದಿರಬೇಕು ಹಾಗೂ ಆ ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಮಾಡಬೇಕು. ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಶಿಖರವನ್ನು ತಲುಪಲು ಸಾಧ್ಯ. ವಿದ್ಯಾರ್ಥಿಗಳು ಸ್ವಯಂ ಶಿಸ್ತುಬದ್ಧರಾಗಿದರೆ ಮಾತ್ರ ಈ ರಾಷ್ಟ್ರ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ. ಆದ್ದರಿಂದ ರಾಷ್ಟ್ರದ ಅಭಿವೃದ್ಧಿ ಪ್ರತಿಯೊಬ್ಬ ವಿದ್ಯಾರ್ಥಿಯ ಕೈಯಲ್ಲಿದೆ. ಆ ಜವಾಬ್ದಾರಿಯನ್ನರಿತು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಗಂಭೀರವಾಗಿ ಅಧ್ಯಯನ ಮಾಡಬೇಕು. ಕಾಲೇಜಿನಲ್ಲಿ ಕೆಲವೊಂದು ನಿಯಮ ನಿಬಂಧನೆಗಳು ಇದ್ದುಅದನ್ನುಯಾವುದೇ ಕಾರಣಕ್ಕೂ […]
ಮಂಗಳೂರು: ಕುಳಾಯಿ ಫೌಂಡೇಶನ್ ನಿಂದ ಬಡ ಮಕ್ಕಳ ದತ್ತು ಸ್ವೀಕಾರ

ಮಂಗಳೂರು: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ದಿಯ ಧ್ಯೇಯವನ್ನಿಟ್ಟುಕೊಂಡು ಕುಳಾಯಿ ಫೌಂಡೇಶನ್ ಅನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಸುಮಾರು 250 ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಫೌಂಡೇಶನಿನ ಸಂಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ಗುರುವಾರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ […]
ಸೂಪರ್ ಮಾಮ್-ಸೀಸನ್ 4- ಸ್ಪರ್ಧಾ ವಿಜೇತೆಯಾಗಿ ಹೊರಹೊಮ್ಮಿದ ಜೋಸ್ಮಿತಾ ಡಿ’ಸಿಲ್ವಾ

ಮಂಗಳೂರು: ಮಾಮ್ಸ್ ಆಫ್ ಮಂಗಳೂರು (MOM) ಎಂಬ ಆನ್‌ಲೈನ್ ಗುಂಪೊಂದು, ಮಂಗಳೂರಿನ ಸುತ್ತಮುತ್ತಲಿನ ತಾಯಂದಿರಿಗೆ ಮೇ 8 ಭಾನುವಾರದಂದು ಫೋರಮ್ ಫಿಜಾ ಮಾಲ್‌ನಲ್ಲಿ ‘ಸೂಪರ್ ಮಾಮ್ 2022 – ಸೀಸನ್ 4’ ಸ್ಪರ್ಧೆಯನ್ನು ಆಯೋಜಿಸಿದ್ದು, ಹಲವಾರು ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಇಎಲ್‌ಸಿ (ಲಿವ್ ಯುವರ್ ಲರ್ನಿಂಗ್), ಸಿ.ಎಫ್.ಎ.ಎಲ್ (ಬಿ ಯುವರ್ ಬೆಸ್ಟ್) ವಹಿಸಿಕೊಂಡಿದ್ದರೆ, ಫೋರಮ್ ಫಿಜಾ ಮಾಲ್‌ನ ಸಹಯೋಗದೊಂದಿಗೆ ಬೋನ್ ಮಸಾಲಾ ಸಂಸ್ಥೆಯು ಸಹ ಪ್ರಾಯೋಜಕತ್ವವನ್ನು ವಹಿಸಿಕೊಂಡಿತ್ತು. ಕಾರ್ಯಕ್ರಮವನ್ನು ಡ್ರೀಮ್ ಕ್ಯಾಚರ್ಸ್ […]