ಬಂಗ್ರಕೂಳೂರು: ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಮಂಗಳೂರು: ಜ.22 ರಂದು ನಡೆದ ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 19 ಜೊತೆ ನೇಗಿಲು ಹಿರಿಯ: 29 ಜೊತೆ ಹಗ್ಗ ಕಿರಿಯ: 19 ಜೊತೆ ನೇಗಿಲು ಕಿರಿಯ: 78 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ ಕನೆಹಲಗೆ: ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ […]
ಮಂಗಳೂರು: ಜ.31 ರಂದು ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ
ಮಂಗಳೂರು: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಜ.31 ಮಂಗಳವಾರದಂದು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 25 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಹತ್ತನೇ ತರಗತಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವೀಧರರು […]
ಮಂಗಳೂರು: ಜ. 22 ರಂದು ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳದವರಿಂದ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ
ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಬಡಗುತಿಟ್ಟಿನ ಪ್ರಸಿದ್ಧ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳದವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನವು ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀ ಭಗವತೀ ದೇವಸ್ಥಾನದ […]
ಮಂಗಳೂರು: ಜ. 15 ರಂದು ರಚನಾ ಅವಾರ್ಡ್-2023 ಪ್ರದಾನ ಕಾರ್ಯಕ್ರಮ
ಮಂಗಳೂರು: ಕ್ಯಾಥೋಲಿಕ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿ ಮಂಗಳೂರು ವತಿಯಿಂದ ನೀಡಲಾಗುವ ರಚನಾ ಅವಾರ್ಡ್-2023 ಅನ್ನು ಜ.15 ರಂದು ಸಂಜೆ 6 ಗಂಟೆಗೆ ಮಿಲಾಗ್ರಿಸ್ ಜುಬಿಲಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರೆ.ಡಾ ಪೀಟರ್ ಪೌಲ್ ಸಲ್ಡಾನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಎಫ್.ಸಿ ಬ್ಯಾಂಕಿನ ಹಿರಿಯ ಕಾರ್ಯಕಾರಿ ಉಪಾಧ್ಯಕ್ಷ ಸಂಜಯ್ ಡಿ’ಸೋಜಾ ಭಾಗವಹಿಸಲಿದ್ದಾರೆ. ಅಧ್ಯಕ್ಷ ವಿನ್ಸೆಂಟ್ ಕುಟೀನಾ, ಕಾರ್ಯದರ್ಶಿ ಲವೀನಾ ಎಸ್.ಮೊಂಟೆರಿಯೋ, ಸಂಚಾಲಕ ಸಿಎ ರುಡಾಲ್ಫ್ ರೊಡ್ರಿಗಸ್, ಸಹ ಸಂಚಾಲಕ ಟೈಟಸ್ […]
ಜ.20 ರಂದು ತುಳುವರನ್ನು ರಂಜಿಸಲು ಬರುತ್ತಿದೆ ಬಹು ನಿರೀಕ್ಷಿತ ತುಳು ಹಾರರ್ ಚಲನಚಿತ್ರ ಶಕಲಕ ಬೂಮ್ ಬೂಮ್
ಮಂಗಳೂರು: ತುಳುವರೆಲ್ಲಾ ಕಾತುರದಿಂದ ಕಾಯುತ್ತಿರುವ ತುಳುನಾಡಿನ ಮೊದಲ ಹಾರರ್ ಚಿತ್ರ ಎನ್ನುವ ಹೆಗ್ಗಳಿಕೆ ಹೊಂದಿರುವ ಶಕಲಕ ಬೂಮ್ ಬೂಮ್ ಚಿತ್ರವು ಜ.20 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ನಿತ್ಯಾನಂದ್ ನಾಯಕ್ ಮಾಹಿತಿ ನೀಡಿ, ಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದಾರೆ. ಉಮೇಶ್ ಪ್ರಭು ಮಾಣಿಬೆಟ್ಟು ಸಹನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಡಾಲ್ವಿನ್ ಕೊಳಗಿರಿ ಸಂಗೀತ ನಿರ್ದೇಶನ ಮತ್ತು ಪ್ರಜ್ವಲ್ ಸುವರ್ಣ ಮತ್ತು ಅರುಣ್ ರೈ ಛಾಯಾಗ್ರಹಣವಿದೆ ಎಂದರು. ಚಿತ್ರವು 150 […]