ಮಂಗಳೂರು :16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ; ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ […]

ಮಂಗಳೂರು: ‘ರೋಹನ್ ಸಿಟಿ’ ಬಿಜೈನಲ್ಲಿ ಆಯ್ದ ಸೇವಾ ನಿರತ ವ್ಯಕ್ತಿಗಳಿಗೆ 10% ವರೆಗೆ ವಿಶೇಷ ರಿಯಾಯಿತಿ

ಮಂಗಳೂರು: ರೋಹನ್‌ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತುಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್‌ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಈ ಸಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಸಮಾಜದ ಆಯ್ದ ಸೇವಾ ನಿರತ ವ್ಯಕ್ತಿಗಳಿಗಾಗಿ ವಿಶೇಷ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಎಂಡಿ, ರೋಹನ್ ಮೊಂತೇರೋ ಹೇಳಿದರು. ಆಗಸ್ಟ್ 26 ರಂದು ನಗರದ ಓಷಿಯನ್ ಪರ್ಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಿಕ್ಷಕರು, ಪೊಲೀಸರು, ಯೋಧರು ಮತ್ತು ಪತ್ರಕರ್ತರಿಗೆ […]

ಮಂಗಳೂರು: ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ

ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಆ. 13 ರಂದು ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಅನ್ನು ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಹಾಗೂ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. […]

ಅವಿಭಜಿತ ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ; ಹೊಂಡ ಗುಂಡಿಯಿಂದ ಅಪಾಯಕ್ಕೆ ಆಹ್ವಾನವೀಯುತ್ತಿದೆ ರಾಷ್ಟ್ರೀಯ ಹೆದ್ದಾರಿ

ಉಡುಪಿ/ ಮಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಉಡುಪಿ ಹಾಗೂ ಮಂಗಳೂರಿನ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದಲ್ಲದೆ, ಅಲ್ಲಲ್ಲಿ, ಮರ-ಮನೆಮಟ್ಟುಗಳು ಉರುಳಿ ಹಲವರು ಪ್ರಾಣ ಕಳೆದುಕೊಂಡ ಘಟನೆಗಳು ವರದಿಯಾಗಿವೆ. ಇದರ ಜೊತೆಗೆ ಧಾರಾಕಾರ ಮಳೆಯಿಂದಾಗಿ ಮುಲ್ಕಿ-ಮಂಗಳೂರು ಹಾಗೂ ನಂತೂರು-ಬಿ.ಸಿ ರೋಡು ರಾ.ಹೆದ್ದಾರಿಯಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿದ್ದು ಅಪಾಯಕ್ಕೆ ಆಹ್ವಾನವೀಯುತ್ತಿದೆ. ಕುಂದಾಪುರ-ಉಡುಪಿ-ಮುಲ್ಕಿ ಮಾರ್ಗವಾಗಿ ಹಲವಾರು ವಾಹನಗಳು ಮಂಗಳೂರಿಗೆ ಪ್ರಯಾಣಿಸುತ್ತವೆ. ನಿತ್ಯ ಸಂಚಾರ ನಡೆಸುವ ಈ ವಾಹನಗಳು ರಾ.ಹೆದ್ದಾರಿಯ ಹೊಂಡ ಗುಂಡಿಗಳನ್ನು ತಪ್ಪಿಸಿಕೊಂಡು ಚಲಿಸಬೇಕಾದ ಪರಿಸ್ಥಿತಿ […]

ಮುಂಗಾರು ಋತುವಿನ ಎಫೆಕ್ಟು: ಕರಾವಳಿಯಲ್ಲಿ ಮೀನಿನ ದರ ದುಪ್ಪಟ್ಟು!!

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆಯ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಹಾಗೂ ಎರಡು ತಿಂಗಳುಗಳವರೆಗೆ ಮೀನುಗಾರಿಕೆಗೆ ನಿಷೇಧ ಹೇರಿರುವುದರಿಂದ ನಿರೀಕ್ಷೆಯಂತೆಯೆ ಮೀನಿನ ದರ ದುಪ್ಪಟ್ಟಾಗಿದೆ. ನಗರದ ಕೆಎಫ್‌ಡಿಸಿ ಯಲ್ಲಿ ಒಂದು ಕೆಜಿ ಬೊಳೆಂಜಿರ್ 1,600 ರೂ, ಅಂಜಲ್ ಮೀನು ಪ್ರತಿ ಕೆಜಿಗೆ 1300 ರೂಗೆ ಮಾರಾಟವಾಗಿದೆ. ಕೇವಲ 12 ದಿನಗಳ ಹಿಂದೆ ಈ ಮೀನುಗಳ ದರ ಈಗಿನ ದರದ ಅರ್ಧದಷ್ಟಿತ್ತು. ದೊಡ್ಡ ಸಿಗಡಿ ಕೆಜಿಗೆ 475 ರೂ ಹಾಗೂ ಬೂತಾಯಿ-ಬಂಗುಡೆ ಮೀನುಗಳು ಕ್ರಮವಾಗಿ ಪ್ರತಿ ಕೆಜಿಗೆ 250 ರೂ ಮತ್ತು […]