ಮಂಗಳೂರು: ತುರ್ತು ಶಸ್ತ್ರ ಚಿಕಿತ್ಸೆಗಾಗಿ 40 ದಿನದ ಮಗು ಬೆಂಗಳೂರಿಗೆ: ಝೀರೊ ಟ್ರಾಫಿಕ್ ಗೆ ಸಾರ್ವಜನಿಕರ ಸಹಕಾರ

ಮಂಗಳೂರು: 40 ದಿನದ ಸೈಫುಲ್ ಅಝ್ಮಾನ್ ಎಂಬ ಮಗುವೊಂದು ಹೃದಯ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಆದರೆ ಇಂದು ತುರ್ತು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಮಗುವನ್ನು ಕೊಂಡೊಯ್ಯಲಾಗಿದೆ. ಉಪ್ಪಿನಂಗಡಿಯಿಂದ ರಾಷ್ಟ್ರೀಯ ಹೆದ್ದಾರಿ 75 ರ ಮೂಲಕ ಹಾಸನ ಕಡೆ ಅಂಬ್ಯುಲೆನ್ಸ್ ಸಂಚರಿಸಿದ ವೇಳೆ ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ ಕಡೆಗಳಲ್ಲಿ ಪೋಲೀಸರು, ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ […]