ಮಂಗಳೂರು: ಯುವ ವೈದ್ಯೆ ನೇಣಿಗೆ ಶರಣು
ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ ಯುವತಿಯೊಬ್ಬಳು ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತಃ ಬೀದರ್ ಜಿಲ್ಲೆಯ ಆನಂದ್ ನಗರದ ನಿವಾಸಿ, ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿರುವ ವೈಶಾಲ್ ಗಾಯಕ್ವಾಡ್ (25) ಮೃತ ಯುವತಿ. ಈಕೆ ತನ್ನ ಎಂಬಿಬಿಎಸ್ ಕ್ಲಾಸ್ ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿ ಸುಜೀಶ್ ನನ್ನು ಪ್ರೀತಿಸುತ್ತಿದ್ದಳು. ಪ್ರಿಯಕರ ಕೂಡ ಅದೇ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಎನ್ನಲಾಗಿದೆ. ಇಬ್ಬರ ನಡುವೆ ವೈಮನಸ್ಸು ಉಂಟಾಗಿ ವೈಶಾಲಿ […]