ಪ್ರಸಿದ್ಧಿ ಪಡೆಯುವ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ವಿಚಾರಣೆ ವೇಳೆ ಬಾಯಿಬಿಟ್ಟ ಆರೋಪಿ
ಮಂಗಳೂರು: ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ಉಡುಪಿಯ ಹೆಬ್ರಿ ತಾಲ್ಲೂಕು ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ (33) ಎಂಬಾತನನ್ನು ಬಂಧಿಸಲಾಗಿದ್ದು, ಈತ ಈ ಹಿಂದೆ ಸ್ಫೋಟಕ ಇಟ್ಟು ಭಾರಿ ಸುದ್ದಿಯಾಗಿದ್ದ ಆರೋಪಿ ಆದಿತ್ಯ ರಾವ್ ನಂತೆ ಪ್ರಸಿದ್ಧಿ ಪಡೆಯುವ ಉದ್ದೇಶದಿಂದ ಹುಸಿ ಬಾಂಬ್ ಕರೆ ಮಾಡಿದ್ದನು ಎಂಬ ಸಂಗತಿ ವಿಚಾರಣೆಯಿಂದ ತಿಳಿದುಬಂದಿದೆ. ಇಂದು ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು. ಬಂಧಿತ […]