ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ಆರೋಪ; ನಿರ್ದೇಶಕರ ಭೇಟಿ, ಪ್ರತಿಭಟನೆ ಎಚ್ಚರಿಕೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ ಕಸ್ಟಮ್ಸ್ ಮತ್ತು ಇಮಿಗ್ರೇಷನ್ ವಿಭಾಗದ ಸಿಬ್ಬಂದಿಗಳು ತಪಾಸಣೆ ಹೆಸರಿನಲ್ಲಿ ಪ್ರಯಾಣಿಕರಿಗೆ ಕಿರುಕುಳ ಮತ್ತು ದಬ್ಬಾಳಿಕೆ ನಡೆಸುತ್ತಿರುವ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸೋಮವಾರ ಮಂಗಳೂರು ವಿಮಾನ ನಿಲ್ದಾಣ ಬಳಕೆದಾರರ ಹಿತರಕ್ಷಣಾ ಸಮಿತಿಯ ನೇತೃತ್ವದ ನಿಯೋಗವು ವಿಮಾನ ನಿಲ್ದಾಣ ನಿರ್ದೇಶಕ ವಿ. ವೆಂಕಟೇಶ್ವರ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿತು. ಕಸ್ಟಮ್ಸ್ ಅಧಿಕಾರಿಗಳ ಅಮಾನವೀಯ ವರ್ತನೆಯಿಂದಾಗಿ ವಿಮಾನ ನಿಲ್ದಾಣದ ಘನತೆ ಮತ್ತು ಗೌರವಕ್ಕೆ ಧಕ್ಕೆ […]