ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ; ₹32.96 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನೊಬ್ಬನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆತನಿಂದ ₹32,96,800 ಮೌಲ್ಯದ 634 ಗ್ರಾಂ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಆರೋಪಿ. ಈತ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದನು ಎಂದು ತಿಳಿದುಬಂದಿದೆ. ಆರೋಪಿ ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ‌ ಮುಂದಾಗಿದ್ದನು ಎಂದು ತಪಾಸಣೆ ವೇಳೆ ಗೊತ್ತಾಗಿದೆ.