ಮಂಗಳೂರಿನಲ್ಲಿ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಈ ಮಗುವನ್ನು ಮಾ. 23 ರಂದು ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 24 ರಂದು ಮಗುವಿನ ಗಂಟಲಿನ ಸ್ರಾವವನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಮಗುವಿನ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕವನ್ನು ಕಲೆಹಾಕಲಾಗುತ್ತಿದೆ […]