ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಎನ್.ಐ.ಎ ತೆಕ್ಕೆಗೆ; ಘಟನೆಯಿಂದ ಪಾಠ ಕಲಿಯಿರಿ ಎಂದ ಆಲೋಕ್ ಕುಮಾರ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ತನಿಖಾ ಸಂಸ್ಥೆಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರವು ಈ ನಿರ್ಧಾರ ಕೈಗೊಂಡು ಯುಎಪಿಎ ಕಾಯ್ದೆಯಡಿ […]

ದೇಶದಾದ್ಯಂತ ಪಿ.ಎಫ್.ಐ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ: ತೇಜಸ್ವಿಸೂರ್ಯ

ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿದೆ. ಆರ್ಟಿಕಲ್ 370ನ್ನು ರದ್ದುಗೊಳಿಸಿರುವುದು ಹಾಗೂ ರಾಮ ಮಂದಿರ ನಿರ್ಮಾಣವನ್ನು ಸಹಿಸಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ಘಾಟಿಸಿ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ […]

ಕುಕ್ಕರ್ ಬಾಂಬ್ ಸ್ಪೋಟದ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹರಿಸುತ್ತೇವೆ: ಸಂಸದ ತೇಜಸ್ವಿ ಸೂರ್ಯ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿ ಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು ಮತ್ತು ಸ್ಪೋಟದ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದರು. ಈ ಹಿಂದೆ ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು […]

ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣ: ಜಾಗತಿಕ ಭಯೋತ್ಪಾದಕರಿಂದ ಪ್ರೇರಿತನಾಗಿದ್ದ ಮೊಹಮ್ಮದ್ ಶಾರಿಕ್

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟದ ಹಿಂದಿನ ಆರೋಪಿ ಮೊಹಮ್ಮದ್ ಶಾರಿಕ್ (24) ಎಂದು ಪೊಲೀಸರು ಸೋಮವಾರ ದೃಢಪಡಿಸಿದ್ದಾರೆ ಮತ್ತು ಆತನ ಕ್ರಮಗಳು “ಜಾಗತಿಕ ಉಪಸ್ಥಿತಿಯ ಭಯೋತ್ಪಾದಕ ಸಂಘಟನೆಗಳಿಂದ ಪ್ರೇರಿತವಾಗಿದೆ” ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇತರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನವಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾರಿಕ್ ಈ ವರ್ಷದ ಆಗಸ್ಟ್ 20 ರಿಂದ ಪೊಲೀಸರ […]