ಮಂಗಳೂರು ವಿವಿಯ ಬಾಕಿ ಪರೀಕ್ಷೆಗಳನ್ನು ಮುಂದುವರಿಸಿ: ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು. ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ […]