ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಸಮೀಪ ಇರುವ ಮೂಡುಕೊಣಾಜೆಯ ಬೃಹತ್ ಶಿಲಾಯುಗದ ನಿವೇಶನದಲ್ಲಿನ ಕಲ್ಮನೆ ಸಮಾಧಿಗಳ ಒಳಭಾಗದಲ್ಲಿ ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ಪತ್ತೆಯಾಗಿವೆ.ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡದಲ್ಲಿ ಪತ್ತೆಯಾಗಿದೆ. ತುಳುನಾಡಿನ ಮಾತೃಮೂಲೀಯ ಸಾಮಾಜಿಕ ವ್ಯವಸ್ಥೆ ಹಾಗೂ ದೈವಾರಾಧನೆಯ ಪ್ರಾಚೀನತೆಯನ್ನು ಬಿಂಬಿಸುವ ಅತ್ಯಂತ ವಿಶ್ವಾಸಾರ್ಹ ದಾಖಲೆಗಳು ಇವಾಗಿವೆ ಎಂದು ಹೇಳಲಾಗಿದೆ. ಹರಪ್ಪಾ ನಾಗರೀಕತೆ ಅಥವಾ ತಾಮ್ರ ಶಿಲಾಯುಗ ಸಂಸ್ಕೃತಿಯ ನಂತರ, ಬೃಹತ್ ಶಿಲಾಯುಗದ ಪದರೀಕೃತ ಸನ್ನಿವೇಶದಲ್ಲಿ […]