ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಪರಿಣಾಮ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ನದಿ, ತೊರೆಗಳು ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಮಳೆ, ಗಾಳಿಗೆ ಈವರೆಗೆ 50ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. 300ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. 10ಕ್ಕೂ ಅಧಿಕ ಟ್ರಾನ್ಸ್ಫಾರ್ಮರ್ಗಳು ಕೆಟ್ಟು ಹೋಗಿವೆ. ತೋಟಗಾರಿಕಾ ಬೆಳೆಗಳು ನೆಲಕಚ್ಚಿದ್ದರೆ, ನದಿಗಳ ಪ್ರವಾಹದಿಂದ ಅಲ್ಲಲ್ಲಿ ಭತ್ತದ ಬೆಳೆ ಪ್ರವಾಹಕ್ಕೆ ಕೊಚ್ಚಿಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, 50ಕ್ಕೂ ಅಧಿಕ […]