ಮಂಗಳೂರಲ್ಲಿ ಕೊರೊನ ಪತ್ತೆ: ವಿಮಾನದಲ್ಲಿದ್ದ 165 ಪ್ರಯಾಣಿಕರ ಮೇಲೂ ನಿಗಾ: ಜಿಲ್ಲಾಧಿಕಾರಿ

ಮಂಗಳೂರು: ವಿಶ್ವವನ್ನೇ ತಲ್ಲಣ ಮೂಡಿಸಿರೋ ಕೊರೊನಾ ಮಹಾಮಾರಿ ಇದೀಗ ಕರಾವಳಿಗೂ ಕಾಲಿಟ್ಟಿದೆ. ಮಂಗಳೂರಿನಲ್ಲಿ ಯುವಕನಿಗೆ ಕೊರೊನಾ ಇರೋದು ದೃಢಪಟ್ಟಿದೆ. ಭಟ್ಕಳ ಮೂಲದ 22 ವರ್ಷದ ಯುವಕನಲ್ಲಿ ಕೊರೊನಾವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ ನೀಡಿದ್ದಾರೆ. ಈ ವ್ಯಕ್ತಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿ ಮಾರ್ಚ್ 19ರಂದು ಸ್ಪೈಸ್ ಜೆಟ್ ವಿಮಾನದ ಮೂಲಕ ಬೆಳಗ್ಗೆ 5:45ಕ್ಕೆ ದುಬೈಯಿಂದ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷೆಗೊಳಪಡಿಸಿದಾಗ ವೈರಸ್ […]