75 ದಿನಗಳ ದಾಖಲೆ ಅವಧಿಯಲ್ಲಿ ರನ್ ವೇ ರಿ-ಕಾರ್ಪೆಟಿಂಗ್ ಪೂರ್ಣಗೊಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ!
ಮಂಗಳೂರು: ಜನವರಿ 27 ರಂದು 2.45 ಕಿಮೀ ಉದ್ದದ ರನ್‌ವೇ 06-24 ರ ರಿ-ಕಾರ್ಪೆಟಿಂಗ್ ಕಾಮಗಾರಿಯನ್ನು ಆರಂಭಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 28 ರಂದು ತನ್ನ ವೇಳಾಪಟ್ಟಿಗಿಂತ ಮುಂಚಿತವಾಗಿ ಕೆಲಸವನ್ನು ಪೂರ್ಣಗೊಳಿಸಿದೆ. ಇದರೊಂದಿಗೆ ಜೂನ್ 1 ರಿಂದ ಹಳೆಯ ವೇಳಾಪಟ್ಟಿಗನುಗುಣವಾಗಿ ವಿಮಾನ ಸಂಚಾರ ನಡೆಯಲಿದೆ. ವಿಮಾನ ನಿಲ್ದಾಣದ ರನ್‌ವೇಗಳನ್ನು ನಿಖರವಾದ, ಅಂತರಾಷ್ಟ್ರೀಯವಾಗಿ ಕಡ್ಡಾಯವಾದ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಲಾಗುತ್ತದೆ. ಆದರೆ ಆಗಾಗ್ಗೆ ಲ್ಯಾಂಡಿಂಗ್ ಮತ್ತು ಟೇಕ್-ಆಫ್ ಆಗುವ ವಿಮಾನಗಳು ರನ್ ವೇಗಳ ಸವೆತಕ್ಕೆ ಕಾರಣವಾಗುತ್ತವೆ. ಮಳೆ […]
ಮಂಗಳೂರು: ಒಳ ಉಡುಪಿನಲ್ಲಿಟ್ಟು 1.69 ಕೋಟಿ ರೂ ಮೌಲ್ಯದ ವಜ್ರ ಅಕ್ರಮ ಸಾಗಾಟ ಯತ್ನ; ವ್ಯಕ್ತಿ ಸೆರೆ
ಮಂಗಳೂರು: ದಿನಂಪ್ರತಿ ಅಕ್ರಮ ಚಿನ್ನ ಸಾಗಾಟದ ಘಟನೆಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುತ್ತವೆ. ಆದರೀಗ ವ್ಯಕ್ತಿಯೋರ್ವ ತನ್ನ ಒಳ ಉಡುಪಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ಮೇ 25ರಂದು ದುಬೈಗೆ ತೆರಳಬೇಕಿದ್ದ ವ್ಯಕ್ತಿಯೋರ್ವ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದು, ಆತನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು […]
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಸಂಚಾರ ಪ್ರಾರಂಭ
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭಿಸಲು ಜನರಿಂದ ಬೇಡಿಕೆ ಬರುತ್ತಿದ್ದರೂ ಕಾರಣಾಂತರಗಳಿಂದ ಇಲ್ಲಿಗೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಪುನರ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭವಾಗಲಿದೆ. ಹಲವು ವರ್ಷಗಳಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ಇದ್ದರೂ ಕೂಡ […]