‘ಜನತಾ ಕರ್ಫ್ಯೂ’ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸಹಮತ 

ಮಂಗಳೂರು: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ‘ಜನತಾ ಕರ್ಫ್ಯೂ’ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸಹಮತ ದೊರೆತಿದೆ. ಜನತೆ ಬೆಳಗ್ಗೆಯಿಂದಲೇ ಉತ್ತಮ ಬೆಂಬಲ ನೀಡಿದ್ದರಿಂದ ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯು ಸ್ತಬ್ಧಗೊಂಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಜನರು ಜಾತಿ-ಮತ ಮತ್ತು ಪಕ್ಷ ಭೇದ ಮರೆತು ಬೆಳಗ್ಗೆ 7ರಿಂದಲೇ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. ವಾರದ ಹಿಂದೆಯೇ ಮಾಲ್‌ಗಳು, ಚಲನಚಿತ್ರ ಮಂದಿರ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರಕಾರ […]