ಪತ್ರಕರ್ತರ ರಾಜ್ಯ ಸಮ್ಮೇಳನ: ಡಾ.ಹೆಗ್ಗಡೆಯವರಿಗೆ ರಾಜ್ಯಾಧ್ಯಕ್ಷರಿಂದ ಅಧಿಕೃತ ಆಹ್ವಾನ
ಧರ್ಮಸ್ಥಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಮಾ. 7 ಮತ್ತು 8ರಂದು ಮಂಗಳೂರು ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 3 ಸಾವಿರ ಪತ್ರಕರ್ತರು ಸೇರುವ ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮಾ. 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು. ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ […]