ಮಂಗಳೂರಿನಲ್ಲಿ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್ ವಿತರಣೆಗೆ ಚಾಲನೆ ಮುಂದಿನ ತಿಂಗಳು ರಾಜ್ಯಾದ್ಯಂತ ಯೋಜನೆ ಜಾರಿ
ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪಿಯುಸಿವರೆಗಿನ ವಿದ್ಯಾರ್ಥಿನಿಯರಿಗೆ ನೀಡುವ ಮೈತ್ರಿ ಮುಟ್ಟಿನ ಕಪ್ ವಿತರಣೆ ಯೋಜನೆಗೆ ಮಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.ಇಂದು ಒಂದೇ ದಿನ 15 ಸಾವಿರ ವಿದ್ಯಾರ್ಥಿನಿಯರಿಗೆ ಮಂಗಳೂರಿನಲ್ಲಿ ಮೆನ್ಸ್ಟ್ರುವಲ್ ಕಪ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪ್ರತಿಯೊಬ್ಬ ವಿದ್ಯಾರ್ಥಿನಿಯರು ಮೈತ್ರಿ ಯೋಜನೆಯ ರಾಯಭಾರಿಗಳಾಗಿ, ಮುಟ್ಟಿನ ಕಪ್ ಹೆಚ್ಚು ಹೆಚ್ಚು ಬಳಕೆಗೆ ಪ್ರೇರಕರಾಗಬೇಕು. ಮೈತ್ರಿ ಯೋಜನೆ […]