ಮಂಗಳೂರು: ವಕೀಲರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ವಕೀಲರ ಸಂಘದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ಶಂಕರ ಭಟ್
ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳೂರು ನ್ಯಾಯಾಲಯದ ಸಂಕೀರ್ಣದ ಹಳೆ ಜಿಲ್ಲಾ ಮುಖ್ಯ ನ್ಯಾಯಾಲಯದ ಕಟ್ಟಡದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ನ್ಯಾಯವಾದಿ ಶಂಕರ್ ಭಟ್ ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿ, 125ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಮಂಗಳೂರು ವಕೀಲರ ಸಂಘಕ್ಕೆ ರಾಜ್ಯ ಹೊರ ರಾಜ್ಯದಲ್ಲೂ ಬಹುಮಾನ್ಯತೆ ಹೊಂದಿದೆ. ಇಲ್ಲಿನ ಅನೇಕ ವಕೀಲರು ಹೈಕೋರ್ಟ್, ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ವಿವಿಧೆಡೆ ಕೋರ್ಟ್ ಗಳಲ್ಲಿ ಸೇವೆ ಸಲ್ಲಿಸಿದ್ದು, ಜಿಲ್ಲೆಗೆ […]