ಮಂಗಳೂರು: ಮಾಲ್ ನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ-ಯುವಕನ ಮೇಲೆ ಹಲ್ಲೆ

ಮಂಗಳೂರು: ನಗರದ ಮಾಲ್ ವೊಂದರಲ್ಲಿ ಬುಧವಾರ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದೆ. ಈ ಬಗ್ಗೆ ಯುವಕ ನೀಡಿದ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳು , ಮಂಜುನಾಥ್ ಅವರನ್ನು ಥಳಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಂಜುನಾಥ್ ಎಂಬಾಂತ ಇದು ಹಿಂದೂ ರಾಷ್ಟ್ರ ಎಂದು ಹೇಳುತ್ತಿರುವುದನ್ನು ಕಾಣಬಹುದಾಗಿದೆ. ‘ಯುವಕ ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ವಿದ್ಯಾರ್ಥಿಗಳ ಗುಂಪಿನಿಂದ ದೂರುದಾರ ಮಂಜುನಾಥ್ ನನ್ನು ಥಳಿಸಲಾಯಿತು’ ಎಂದು […]