ಮಂಗಳೂರು: ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ

ಮಂಗಳೂರು: ಈಚೆಗೆ ಖಾಸಗಿ ಬಸ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಹುಸೇನ್ ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ಮಂಗಳೂರಿನ ಕೆ.ಎಸ್‌.ಹೆಗ್ಡೆ ಕಾಲೇಜಿನಿಂದ ಖಾಸಗಿ ಬಸ್‌ನಲ್ಲಿ ಪಂಪ್‌ವೆಲ್‌ಗೆ ಹೋಗುತ್ತಿದ್ದ ವೇಳೆ ಆಕೆಯ ಪಕ್ಕದಲ್ಲಿ ಕುಳಿತುಕೊಂಡು ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ಯುವತಿ ಆತನ ಪೋಟೋ ಸಮೇತವಾಗಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಳು. ಇದು ಬಹಳಷ್ಟು ವೈರಲ್ ಕೂಡ […]