ಮಂಗಳೂರು: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ಸ್ಥಗಿತ

ಮಂಗಳೂರು: ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನಿಂದ ಪತ್ರಿಕಾ ಭವನದಲ್ಲಿ ನಡೆಸುವ ಪತ್ರಿಕಾಗೋಷ್ಠಿಗಳನ್ನು ಮಾರ್ಚ್ 23ರಿಂದ ಮಾರ್ಚ್ 31ರ ತನಕ ರದ್ದುಪಡಿಸಲಾಗಿದೆ. ನೆರೆಯ ಕಾಸರಗೋಡು, ಕೊಡಗು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರೆಸ್‌ಕ್ಲಬ್ ಕೂಡ ಹಲವು‌ ಮಂದಿ ಸೇರುವ ಜಾಗವಾದ ಕಾರಣ, ಪತ್ರಕರ್ತರ ಆರೋಗ್ಯದ ದೃಷ್ಠಿಯಿಂದ ಈ ಅನಿವಾರ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಾರ್ಚ್ 31ರ ನಂತರ ಪರಿಸ್ಥಿತಿ ಅವಲೋಕಿಸಿ, […]