ಮಂಗಳೂರು: ತೆಲಂಗಾಣ ಪಶುವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಮಂಗಳೂರು: ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದುರ್ಗಾವಾಹಿನಿಯಿಂದ ಪ್ರತಿಭಟನೆ ನಡೆಯಿತು. ತೆಲಂಗಾಣದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಖಂಡನೀಯ. ದೇಶದ ಬೇರೆ ಕಡೆ ಕೂಡ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಇದರ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರ ವಹಿಸಿದರು. ದುರ್ಗಾವಾಹಿನಿಯ ನೂರಾರು ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.