ಮಂಗಳೂರು: ಮಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ; ಭಾರೀ ಭದ್ರತೆ
ಮಂಗಳೂರು: ಎನ್‌ಆರ್‌ಸಿ, ಸಿಎಎ ವಿರುದ್ಧ ನಾಳೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ಈ ಪ್ರತಿಭಟನೆಯ ನೇತೃತ್ವ ವಹಿಸಿವೆ. ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ನಾಳೆ ಮಧ್ಯಾಹ್ನ 2:30ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 1 ಲಕ್ಷ ಮಂದಿ ಭಾಗವಹಿಸಲಿದ್ದಾರೆ. ಉಭಯ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಸಮಾವೇಶದಲ್ಲಿ ನಿವೃತ್ತ ಐಎಎಸ್ […]