ದ.ಕ. ಜಿಲ್ಲೆಯ ವಿವಿಧೆಡೆ ಭಾರೀ ಮಳೆ: ಅಲ್ಲಲ್ಲಿ ಹಾನಿ
ಮಂಗಳೂರು: ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಗುಡುಗು ಸಹಿತ ಸುರಿದ ಭಾರೀ ಮಳೆಗೆ ವಿವಿಧೆಡೆ ಹಾನಿ ಉಂಟಾಗಿದೆ. ಸಂಜೆ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ಸುಬ್ರಹ್ಮಣ್ಯ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿ ಉಂಟಾಯಿತು. ಅಲ್ಲದೆ ಕೆಲವು ಮನೆಗಳಿಗೆ ಅಳವಡಿಸಿದ್ದ ಸಿಮೆಂಟ್ ಶೀಟ್ಗಳು ಗಾಳಿಗೆ ಹಾರಿ ಹೋಗಿದೆ. ಸುಬ್ರಹ್ಮಣ್ಯದ ಬಿಲದ್ವಾರದ ವಾಲಗದ ಕೇರಿ ನಿವಾಸಿ ಆನಂದ ಎಂಬವರ […]