ಒಂದೇ ದಿನದಲ್ಲಿ‌ ನನಗೆ ದೇಶದ್ರೋಹಿ ಪಟ್ಟ ಕಟ್ಟಿದರು: ಸಸಿಕಾಂತ್ ಸೆಂಥಿಲ್ ಬೇಸರ

ಮಂಗಳೂರು: 10 ವರ್ಷಗಳ ಕಾಲ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಆದರೆ ಕೇವಲ ಒಂದೇ ದಿನದಲ್ಲಿ ದೇಶದ್ರೋಹಿ ಎಂದು ನನ್ನನ್ನು ಕರೆದಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ನಿಕಟ ಪೂರ್ವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ‌ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಅವರು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಮಂಗಳೂರಿನ ಗರೋಡಿ ಬ್ರಹ್ಮಬೈದರ್ಕಳ ದೇವಸ್ಥಾನ ದಲ್ಲಿ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಸಿಕಾಂತ್ ಸೆಂಥಿಲ್ ಬಾಪು ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ಉಸನ್ಯಾಸ […]

ದ.ಕ. ಜಿಲ್ಲೆಯಾದ್ಯಂತ ನೆರೆ: ನಿರಂತರ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಿ ಸಾರ್ವಜನಿಕ ಜೀವ ಹಾನಿ ತಪ್ಪಿಸಲು ಪ್ರಯತ್ನಿಸಬೇಕು ಎಂದು‌ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆಯಲ್ಲಿ ಸೂಚನೆ ರವಾನಿಸಿದ್ದಾರೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕೆಲ ಪ್ರದೇಶಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಅಲ್ಲಿಯೇ ಇದ್ದು, ಪರಿಸ್ಥಿತಿಯನ್ನು ಗಮನಿಸಬೇಕು. ಗಂಜಿ ಕೇಂದ್ರಗಳಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಆಹಾರ, ಪುರುಷರಿಗೆ, ಮಹಿಳೆಯರಿಗೆ […]