ಸ್ಮಾರ್ಟ್ ಸಿಟಿ ಬಸ್ಸ್ ಶೆಲ್ಟರ್ ತಂಗುದಾಣ: ವಿಚಾರಣೆ ನಡೆಸಲು ಸಂಸದರ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಡೆಗಳಲ್ಲಿ ನಿರ್ಮಿಸಲಾಗಿರುವ ಬಸ್ ಶೆಲ್ಟರ್‍ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಸ್ಮಾರ್ಟ್ ಸಿಟಿಯಡಿ ಪ್ರತಿ ಬಸ್ ಶೆಲ್ಟರ್‍ಗೆ ರೂ. 12 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಈ ಬಸ್ಸ್ ಶೆಲ್ಟರ್‍ನಲ್ಲಿ ವಿನ್ಯಾಸ ಅವೈಜ್ಞಾನಿಕವಾಗಿದೆ. […]