ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಉಡುಪಿ, ಮಂಗಳೂರಿನಲ್ಲಿ ಭರದಿಂದ ಸಾಗಿದ ಹಬ್ಬದ ತಯಾರಿ
ಮಂಗಳೂರು (ದಕ್ಷಿಣ ಕನ್ನಡ) :ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ತಯಾರಿ ನಾಳೆ ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಗೆ ಸಿದ್ದತೆ ನಡೆಯುತ್ತಿದೆ.ಅಷ್ಟಮಿ ಸಂಭ್ರಮಾಚರಣೆಗೆ ಉಡುಪಿಯಲ್ಲಿ ಶ್ರೀಕೃಷ್ಣ ಮಠದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿದ್ದತೆ ನಡೆದಿವೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಅಷ್ಟಮಿಗೆ ಮೂಡೆ/ಕೊಟ್ಟಿಗೆ/ ಗುಂಡ ತಿಂಡಿಗೆ ಎಲೆ ಕಟ್ಟುವುದು, ದೇವರ ಅಲಂಕಾರ ಮಾಡುವುದಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಕಾರ್ ಸ್ಟ್ರೀಟ್ ನಲ್ಲಿ ಮಹಿಳೆಯರು ಮೂಡೆ, ಕೊಟ್ಟಿಗೆ, ಗುಂಡ ಎಲೆ ಕಟ್ಟಿ ಮಾರಿದರೆ, ಘಟ್ಟದ ಮೇಲಿನಿಂದ ಬಂದ ವ್ಯಾಪಾರಿಗಳು ಹೂವಿನ ಮಾರಾಟದಲ್ಲಿ […]