ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ: ಹಲವೆಡೆ ಹಾನಿ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಹಾನಿ ಸಂಭವಿಸಿದೆ. ಗಾಳಿ, ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೆರೆಯ ಭೀತಿ ಉಂಟಾಗಿದೆ. ನಗರದ ಹಲವೆಡೆ ವಿದ್ಯುತ್ ಕಂಬ, ಮರಗಳು ಧರೆಗುರುಳಿವೆ. ಅಜ್ಜರಕಾಡು ಸಮೀಪ ಆರು ವಿದ್ಯುತ್ ಕಂಬ ಉರುಳಿ ಮೂರು ಗೂಡಂಗಡಿಗಳಿಗೆ ಹಾನಿ ಉಂಟಾಗಿದೆ. ಡಯಾನಾ ಥಿಯೇಟರ್ ಬಳಿ ಮನೆಯ ಮೇಲೆಮರ ಉರುಳಿ ಬಿದ್ದಿದೆ. ಕಾಪು, ಬ್ರಹ್ಮಾವರ ಪರಿಸರದಲ್ಲೂ ಹಲವೆಡೆ ಹಾನಿ ಸಂಭವಿಸಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ […]