ಡಿ.ಕೆ.ಶಿಗೆ ಇಡಿ ಕಿರುಕುಳ ನೀಡುತಿದೆ ಎಂದು ಆರೋಪಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶ

ಮಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಇಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಕೇಂದ್ರ ಸರಕಾರದ ಕೈಗೊಂಬೆಯಾಗಿ ವರ್ತಿಸಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ರಿಗೆ ಇಡಿ ಅನಗತ್ಯ ಕಿರುಕುಳ ನೀಡುತ್ತಿದೆ. ಕೇಂದ್ರ […]

ಟಿಬೆಟಿಯನ್ ವಿದ್ಯಾರ್ಥಿಗಳೊಂದಿಗೆ ದಲೈಲಾಮ‌ ಸಂವಾದ: ಮುನ್ನೆಚ್ಚರಿಕಾ‌ ಕ್ರಮವಾಗಿ ಬಂದೋಬಸ್ತ್

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಹ್ವಾನಿತ ಟಿಬೇಟಿಯನ್ ವಿದ್ಯಾರ್ಥಿಗಳೊಂದಿಗೆ ನಗರದ ತಾಜ್ ಗೇಟ್ ವೇ ಹೋಟೆಲ್​​​​ನಲ್ಲಿ ಸಂವಾದ ನಡೆಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಹೋಟೆಲ್ ​​​ಗೆ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿತ್ತು, ಅಲ್ಲದೇ ಮಾದ್ಯಮ ಸಹಿತ ಆಹ್ವಾನ ಇಲ್ಲದ ಯಾರಿಗೂ ಕಾರ್ಯಕ್ರಮಕ್ಕೆ ಪ್ರವೇಶವಿರಲಿಲ್ಲ. ಅನಂತರ ಪಂಪ್ ವೆಲ್ ನಲ್ಲಿರುವ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕೆಥೋಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ಅಲ್ಲಿಯೂ ಕೂಡ ಬಂದೋಬಸ್ತ್​ ವ್ಯವಸ್ಥೆ ಮಾಡಿ, ದಲೈ ಲಾಮಾ […]

ಮಂಗಳೂರು: 350ಕ್ಕೂ ಅಧಿಕ ರೌಡಿಗಳಿಗೆ ಪೊಲೀಸ್ ಪೆರೇಡ್

ಮಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ 350ಕ್ಕೂ ಹೆಚ್ಚು ರೌಡಿಗಳನ್ನು ಮಂಗಳೂರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಪರೇಡ್ ನಡೆಸಿ ಎಚ್ಚರಿಕೆ ನೀಡಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಾಮಾನ್ಯ ನಾಗರಿಕರಂತೆ ಬದುಕಬೇಕು. ಈಗಾಗಲೇ ತೊಡಗಿಸಿಕೊಂಡಿರುವವರು ಅದನ್ನು ಬಿಟ್ಟು ಗೌರವಯುತ ವೃತ್ತಿಗಳಲ್ಲಿ ಮುಂದುವರಿಯಬೇಕು. ಪ್ರತಿಯೊಬ್ಬರ ಚಲನವಲನಗಳನ್ನು ಪೊಲೀಸ್ ಇಲಾಖೆ ಗಮನಿಸುತ್ತಿರುತ್ತದೆ. ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸುತ್ತೇವೆ ಎಂದು ಮಂಗಳೂರು ಪೊಲೀಸ್ ಅಯುಕ್ತರು ಎಚ್ಚರಿಕೆ ನೀಡಿದರು.

ಯಕ್ಷಗಾನ- ಶಾಸ್ತ್ರೀಯ ಸಂಗೀತ-ಚಿತ್ರಕಲೆ 43ನೇ ಶಾಖೆಯ ಉದ್ಘಾಟನೆ

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿಣ್ಣರಲೋಕ ಮೋಕೆದ ಕಲಾವಿದರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ಅಶ್ರಯದಲ್ಲಿ ಯಕ್ಷಗಾನ, ಶಾಸ್ತ್ರೀಯ ಸಂಗೀತ, ಚಿತ್ರಕಲೆ ತರಬೇತಿಯ 43ನೇ ಶಾಖೆಯನ್ನು ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಲೈನ್ ಬಳಿಯ ಮುನಿಶ್ವೇರ ಮಹಾಗಣಪತಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಪ್ರಸನ್ನ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರಾದ ಸುದರ್ಶನ್ ಜೈನ್ ಪಂಜಿಕಲ್ಲು ವಹಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ನಿವೃತ್ತ ಬ್ಯಾಂಕ್ […]