ಮಂಗಳೂರು: ಜ.11ರಂದು ಉಳ್ಳಾಲ ನರಿಂಗಾನ ಕಂಬಳೋತ್ಸವ.
ಮಂಗಳೂರು: ವಿಧಾನಸಭೆ ಸ್ಪೀಕರ್, ಶಾಸಕ ಯು.ಟಿ.ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ನಡೆಯಲಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸಿಎಂ ಸಿದ್ದರಾಮಯ್ಯ ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ಪಜೀರಿನಲ್ಲಿ 25 ವರ್ಷ ಕಂಬಳ ನಡೆಸಿದ, ಕೋಣದ ಯಜಮಾನ ವೆಂಕಪ್ಪ […]