ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟ: ಆಳ್ವಾಸ್ ಚಾಂಪಿಯನ್ಸ್

ಉಡುಪಿ: ಮಂಗಳೂರು ವಿವಿ ಮತ್ತು ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಯೋಗದಲ್ಲಿ ನಡೆದ 45ನೇ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಜಿಲ್ಲೆಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ 472 ಅಂಕಗಳನ್ನು ಪಡೆದು ಸಮಗ್ರ ಚಾಂಪಿಯನ್‌ಶಿಪ್ ಅನ್ನು ತಮ್ಮದಾಗಿಸಿ ಕೊಂಡಿತು. ಎಸ್.ಡಿ.ಎಮ್ ಕಾಲೇಜು ಉಜಿರೆ ದ್ವಿತೀಯ ಸ್ಥಾನ ಮತ್ತು […]