ಮಂಗಳೂರು ವಿ.ವಿ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ಹೃದಯಾಘಾತವಾಗಿದೆ. ಪ್ರೊ.ಕೆ.ಬೈರಪ್ಪ ಅವರು 2014 ರಿಂದ 2019 ರವರೆಗೆ ಐದು ವರ್ಷ ಕಾಲಾವಧಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಟನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ಆದಿಚುಂಚಗಿರಿ ವಿವಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು ವಿವಿ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ
ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್, ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಮಂಗಳೂರು ವಿವಿ ಪುರುಷರ ಮತ್ತು ಮಹಿಳೆಯರ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಿದ ಮಾಜಿ ಶಾಸಕ ಕೆ.ರಘುಪತಿ ಭಟ್, ಸರಕಾರಿ ಸಂಸ್ಥೆಗಳಲ್ಲಿ ಇದೇ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟುಉತ್ತೇಜನ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ತೆಂಕನಿಡಿಯೂರು ಕಾಲೇಜಿನ […]
ಪದವಿ ಫಲಿತಾಂಶ ಮತ್ತುಅಂಕಪಟ್ಟಿ ಸಮಸ್ಯೆ: ಮಂಗಳೂರು ವಿವಿಗೆ ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರು
ಮಂಗಳೂರು: ಎಬಿವಿಪಿ ಮಂಗಳೂರು ವತಿಯಿಂದ ಮಂಗಳೂರು ವಿಶ್ವ ವಿದ್ಯಾಲಯದ ಫಲಿತಾಂಶ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲಾಯಿತು. ಈ ಸಂದರ್ಭ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಕಾರ್ಯಕರ್ತರು ನಮಗೆ ನ್ಯಾಯ ಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳ ಫಲಿತಾಂಶ ಬರಲು ವಿಳಂಬವಾಗಿದೆ, ಅಂಕಪಟ್ಟಿಯೂ ಬಂದಿಲ್ಲ. ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿದೆ. ಫಲಿತಾಂಶ ಬಾರದಿದ್ದರೂ ಕಾಲೇಜು ಶುಲ್ಕ ವಸೂಲಾತಿ ಮಾಡಲಾಗಿದೆ. ಇದರಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಇದಕ್ಕೆ ನೇರವಾಗಿ ವಿಶ್ವ ವಿದ್ಯಾಲಯದ […]
ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗಾಗುತ್ತಿರುವ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಮನವಿ ನೀಡಿದ ಎಬಿವಿಪಿ
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಕುರಿತು ಡಿ.17 ರಂದು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯವು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ ಇರುವುದು, ಮರು ಪರೀಕ್ಷೆ ಹಾಗೂ ಮರುಮೌಲ್ಯಮಾಪನಗಳಲ್ಲಿ ಗೊಂದಲ, ಮರು ಮೌಲ್ಯಮಾಪನದಲ್ಲಿ ಶುಲ್ಕ ಮರುಪಾವತಿಗೆ ನಿಗದಿ ಪಡಿಸಿದಷ್ಟು ಅಂಕ ಬಂದರೂ ಸಹ ಕಟ್ಟಿದ ಶುಲ್ಕವು ಮರುಪಾವತಿಯಾಗದಿರುವುದು, […]
ಕುಂದಾಪುರ: ಮಂಗಳೂರು ವಿವಿಯಿಂದ ಅನುಭವಿಸುತ್ತಿರುವ ಸಮಸ್ಯೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಬಗ್ಗೆ ಡಿ.15 ರಂದು ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ , ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿದೆ. ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ […]