ಜನರ ಬೇಡಿಕೆಗಳನ್ನು ಈಡೇರಿಸಲು ಶಕ್ತಿ ಮೀರಿ ಪ್ರಯತ್ನಿಸುವೆ: ಶಾಸಕ ಕಾಮತ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲ್ಲಿಗುಡ್ಡೆಯ ಜಯನಗರ ಪ್ರದೇಶಕ್ಕೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳ ಹಿಂದೆ ಈ ಪ್ರದೇಶವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು ಅದಕ್ಕೂ ಮೊದಲು ಈ ಭಾಗ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿತ್ತು. ಈ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ. ಮೂಲಭೂತ ಸೌಕರ್ಯಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ. ಈ […]