ಏ. 12ರಂದು‌ ನಿಗದಿಪಡಿಸಿದ್ದ ಮಂಗಳೂರು ವಿವಿಯ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಏ. 12ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಶೀಘ್ರವೇ ತಿಳಿಸಲಾಗುವುದು ಎಂದು ಮಂಗಳೂರು ವಿವಿಯ ಕುಲಸಚಿವರು ತಿಳಿಸಿದ್ದಾರೆ.