ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿ ಲಿ., ಮಂಗಳೂರು

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟವ್‌ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವದ ಪ್ರಯುಕ್ತ ಗೃಹನಿರ್ಮಾಣದ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನೂತನವಾಗಿ ನಿರ್ಮಿಸಲಾದ ನಿವಾಸದ ಹಸ್ತಾಂತರ ಮತ್ತು ಸಸಿ ವಿತರಣಾ ಸಮಾರಂಭವು ದಿನಾಂಕ 06-07-2025 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆ: ಶ್ರೀ ಪಿ. ಉಪೇಂದ್ರ ಆಚಾರ್ಯ, ಅಧ್ಯಕ್ಷರು, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಉದ್ಘಾಟಕರು: ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಸಂಸದರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದೀಪ […]

ಮಂಗಳೂರು: ಅಮೆಜಾನ್ ಕಂಪನಿಯಿಂದ ಜು.12 ರಂದು ನೇರ ಸಂದರ್ಶನ

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ರೂ. ವೇತನವುಳ್ಳ, 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12 ರಂದು ಮಂಗಳವಾರ, ಮಂಗಳೂರಿನ ಉರ್ವಾ ಮಾರುಕಟ್ಟೆಯ 2 ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್‍ಫೋ ನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 […]

ದೋಣಿಯಿಂದ ಬಿದ್ದು ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ 

ಮಂಗಳೂರು: ನಗರದ ಹಳೆ ಬಂದರು ಮೀನುಗಾರಿಕಾ ದಕ್ಕೆಯ ದಕ್ಷಿಣ ಭಾಗದಲ್ಲಿ ಶುಕ್ರವಾರ ಬೆಳಗ್ಗೆ ಮೀನುಗಾರಿಕಾ ದೋಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಸೆಲ್ವಂ (41) ಅವರ ಮೃತದೇಹ ಶನಿವಾರ ಸಂಜೆ ಹೊಸ ದಕ್ಕೆಯ ಬಳಿ ಪತ್ತೆಯಾಗಿದೆ. ಸೆಲ್ವಂ ಅವರು ಶುಕ್ರವಾರ ದೋಣಿಯ ಫ್ಯಾನ್ ದುರಸ್ತಿ ಮಾಡಲು ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಪಾಂಡೇಶ್ವರ ಪೊಲೀಸರು ಮುಂದಿನ ಕ್ರಮ‌ ನಡೆಸುತ್ತಿದ್ದಾರೆ.

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿಯಿತು. ಮುಂಜಾನೆಯಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ‌ ಮಂಗಳೂರಿನ ವಿವಿಧೆಡೆ ನೀರು ತುಂಬಿ ಜನರ ಓಡಾಟಕ್ಕೆ ಅಡಚಣೆ ಉಂಟಾಯಿತು. ಪಾಂಡೇಶ್ವರ ಸಮೀಪದ ಸುಭಾಷ್ ನಗರ ಪ್ರಥಮ ಕ್ರಾಸ್ ಸಂಪೂರ್ಣ ಜಲಾವೃತವಾಗಿತ್ತು. ಹಾಗೆಯೇ ಕೇಂದ್ರ ರೈಲು ನಿಲ್ದಾಣಕ್ಕೆ ಮತ್ತೆ ನೀರು ನುಗ್ಗಿದೆ. ಕೃತಕ ನೆರೆಯಿಂದ ರೈಲು ನಿಲ್ದಾಣದ ಆವರಣ ಕೆರೆಯಂತಾಗಿತ್ತು. ರೈಲು ನಿಲ್ದಾಣಕ್ಕೆ ಆಗಮಿಸುವ, ನಿರ್ಗಮಿಸುವ ಪ್ರಯಾಣಿಕರು ಪರದಾಡುವಂತಾಗಿದೆ. ನಗರದ ಫಳ್ನೀರ್ ರಸ್ತೆ, ಕೊಟ್ಟಾರ ಚೌಕಿ ಜಲಾವೃತಗೊಂಡಿತು. ಒಳಚರಂಡಿಯಲ್ಲಿ […]

ಮಂಗಳೂರು: ಅಡುಗೆ ಅನಿಲ ಸ್ಪೋಟ ಓರ್ವನಿಗೆ ಗಾಯ

ಮಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಗಾಯಗೊಂಡ ಘಟನೆ ಮಂಗಳೂರಿನ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಶುಕ್ರವಾರ  ನಡೆದಿದೆ. ರೀಗಲ್ ಪ್ಲಾಝಾ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಹೋಟೆಲ್ ವೊಂದರಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹೋಟೆಲ್ ಅಡುಗೆ ಸಿಬ್ಬಂದಿ ಅಶ್ರಫ್ ಎಂಬುವವರು ಗಾಯಗೊಂಡಿದ್ದಾರೆ. ಬೆಳಗ್ಗೆ ಹೋಟೆಲ್ ತೆರೆದು ಅಡುಗೆ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ […]