ದ.ಕ. ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಿಂಧು ರೂಪೇಶ್ ಅವರು ಉಡುಪಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರಿನ ಎನ್‌ಐಇಯಿಂದ ಬಿ.ಇ ಪದವಿ ಪಡೆದಿರೋ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಗುರುವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಹಿನ್ನೆಲೆಯಲ್ಲಿ ಸಿಂಧು ಅವರನ್ನು ನೇಮಕ ಮಾಡಲಾಗಿದೆ. ಉಡುಪಿಯ ನೂತನ ಸಿಇಒ ಆಗಿ ಉತ್ತರ ಕನ್ನಡ ಜಿಲ್ಲೆಯ ಎಸಿ […]