ಮಂಗಳೂರು: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ; ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಣೆ

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರವಾಸ ನಡೆಸಿ, ವಿವಿಧೆಡೆ ನೆರೆ ಹಾಗೂ ಮಳೆಯಿಂದಾದ ಹಾನಿ ಪರಿಶೀಲಿಸಿ, ಅಧಿಕಾರಿಗಳ ಜತೆಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿ, ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಿಸಿದರು. ಮಡಿಕೇರಿಯಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳ ನಿರೀಕ್ಷಣೆ ನಡೆಸಿ ಅಲ್ಲಿಂದ ಸುಳ್ಯಕ್ಕೆ ತೆರಳುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ.ಜಿಲ್ಲೆಯ ಸಂಪಾಜೆಗೆ ಭೇಟಿ ನೀಡಿ ಮಳೆ ಹಾಗೂ ಭೂಕಂಪದಿಂದ ಹಾನಿಗೊಂಡು ಬಿರುಕು ಬಿಟ್ಟಮನೆಗಳ ವೀಕ್ಷಣೆ ನಡೆಸಿದರು. ಕೊಯನಾಡು ಗಣಪತಿ […]