ಬಿಜೆಪಿ ಸರಕಾರ ರಚನೆ ಸಂವಿಧಾನಕ್ಕೆ ಮಾಡಿದ ಅಪಚಾರ: ಐವನ್ ಡಿಸೋಜ
ಮಂಗಳೂರು: ಯಡಿಯೂರಪ್ಪ ಅವರಿಗೆ ಬಹುಮತ ಇಲ್ಲ, ಅಲ್ಪ ಮತದ ಸರಕಾರವಾಗಿದ್ದು, ಸಂವಿಧಾನದ ನಿಯಮ ಗಾಳಿಗೆ ತೂರಿ ಸರಕಾರ ರಚಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ, ದೇಶದಲ್ಲಿ ಎಲ್ಲೂ ನಡೆಯಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ರಾಜ್ಯಪಾಲರು ಪಕ್ಷಪಾತ ಮಾಡಿದ್ದಾರೆ. ಯಾರಾದರೂ ಇದರ ವಿರುದ್ಧ ಕೊರ್ಟ್ ಹೋದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸದನದ ಸದಸ್ಯರ ಸಂಖ್ಯೆ ಕೂಡ ಗಣನೆಗೆ ತೆಗೆದುಕೊಳ್ಳಲಿಲ್ಲ. ಬಿಜೆಪಿಯದ್ದು, ಸಂಖ್ಯಾಬಲ ಇಲ್ಲದ, […]
ಮಂಗಳೂರು: ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಖಾಸಗಿ ಕಂಪೆನಿಯ ಮೇಲ್ವಿಚಾರಕರೊಬ್ಬರು ಬಲಿಯಾಗಿದ್ದಾರೆ. ನವೀನ್ ಚಂದ್ರ ಕದ್ರಿ (56), ಮೃತಪಟ್ಟವರು. ಅವರು ಆ್ಯಂಟನಿ ವೇಸ್ಟ್ ಎಂಬ ಕಂಪೆನಿಯ ಮಂಗಳೂರು ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತೀವ್ರ ಜ್ವರಕ್ಕೆ ತುತ್ತಾಗಿದ್ದ ನವೀನ್ ಚಂದ್ರ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಗ್ಯೂ ಬಾಧಿಸಿರುವುದು ಪತ್ತೆಯಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ಮಂಗಳೂರು: ಸಾಂಕ್ರಮಿಕ ರೋಗಕ್ಕೆ ಆಹ್ವಾನ: 5000 ರೂ. ದಂಡ
ಮಂಗಳೂರು: ಡೆಂಗ್ಯು ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಜೀವಿಗಳಿಗೆ ಆಸ್ಪದ ನೀಡುವ ಅಂಗಡಿ ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಹಾನಗರಪಾಲಿಕೆ ಅಧಿಕಾರಿಗಳು, ಶನಿವಾರ ಹಳೇ ಟಯರ್‍ಗಳಲ್ಲಿ ನೀರು ನಿಂತು ರೋಗಕ್ಕೆ ಆಹ್ವಾನ ನೀಡುತ್ತಿದ್ದ ವ್ಯಕ್ತಿಗೆ ರೂ. 5000 ದಂಡ ವಿಧಿಸಿದೆ. ಕಣ್ಣೂರು ಕೆಫೆಕಾರ್ಟ್ ಸಂಸ್ಥೆಯ ಮಾಲಕ ನಿಶಾನ್ ಚಂದ್ರ ಎಂಬವರು ತನ್ನ ಆವರಣದಲ್ಲಿ ಹಳೆಯ ಟಯರ್‍ಗಳನ್ನು ಇಟ್ಟಿದ್ದು, ಇದರಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ […]
ಪಚ್ಚನಾಡಿ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಲೋಕಾಯುಕ್ತ ನ್ಯಾ.ಮೂ. ವಿಶ್ವನಾಥ ಶೆಟ್ಟಿ ಬೇಟಿ
ಮಂಗಳೂರು: ಮಂಗಳೂರಿನ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಹಾರ ಕೇಂದ್ರ ಎಲ್ಲಾ ಕಟ್ಟಡಗಳನ್ನು, ಅಡುಗೆ ಕೋಣೆ, ಶೌಚಾಲಯ, ಕೈತೋಟವನ್ನು ವೀಕ್ಷಿಸಿದರು. ಕೇಂದ್ರದ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಅನಂತರ ಮಾತನಾಡಿದ ಅವರು, ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಮಂಗಳೂರು ತಹಶೀಲ್ದಾರ್‌ಗೆ ಈ ಸೂಚನೆ ನೀಡಿದರು. ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕರೆ ಜಾಗದಲ್ಲಿದ್ದು, […]
ದ.ಕ. ಜಿಲ್ಲೆಯಲ್ಲಿ ಮಳೆ ಚುರುಕು: 2-3 ದಿನ ಮುಂದುವರಿಯುವ ಸಾಧ್ಯತೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ಕೊಂಚ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದ್ದು, ಗುರುವಾರವೂ ಮುಂದುವರಿದಿದೆ. ಗುರುವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿ ಉಂಟಾಯ್ತು. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ನೇತ್ರಾವತಿ, ಕುಮಾರಧಾರ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನೂ 3, 4 ದಿನಗಳ ಕಾಲ ಭಾರಿ […]