ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ: ಪ್ರೊ. ಪಿ.ವಿ.ಕೃಷ್ಣ ಭಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ ಕ್ಷೇತ್ರಕ್ಕೆ ನಾಡಿಗೆ ಮತ್ತು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಅದರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಹುಮುಖ್ಯ ಪಾತ್ರವಿದೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯ ಕುಲಾಧಿಪತಿಗಳಾದ ಪ್ರೊ. ಪಿ.ವಿ. ಕೃಷ್ಣ ಭಟ್ ಶ್ಲಾಘಿಸಿದರು. ಗುರುವಾರ ಮಂಗಳೂರು ವಿವಿಯ 40ನೇ ಯ ಸಂಸ್ಥಾಪನಾ ದಿನಾಚರಣೆಯನ್ನು ವಿವಿಯ ಮಂಗಳ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯು ದೇಶದ ಬ್ಯಾಂಕಿಂಗ್ ಉದ್ಯಮ, ಶಿಕ್ಷಣ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತುಂಬಾ ಮಹತ್ವದ ಕೊಡುಗೆಯನ್ನು […]