ಸೆ. 20-21: ಮಂಗಳೂರು ವಿ. ವಿ.ಮಟ್ಟದ ಚೆಸ್ ಚಾಂಪಿಯನ್‌ಶಿಪ್

ಉಡುಪಿ: ಮಂಗಳೂರು ವಿ. ವಿ.ಮಟ್ಟದ ಪುರುಷ ಹಾಗೂ ಮಹಿಳಾ ಚೆಸ್ ಚಾಂಪಿಯನ್‌ಶಿಪ್ 2019-20 ಉಡುಪಿಯ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸೆಪ್ಟೆಂಬರ್ 20-21 ರಂದು ನಡೆಯಲಿದೆ. ಸೆ.20ರಂದು ಬೆಳಿಗ್ಗೆ 9.30ಕ್ಕೆ ‌ಪಿಐಎಂನ ಪ್ರಜ್ಞಾ ಹಾಲಿನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ  ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚಿಸಲಿದ್ದಾರೆ. ಪಿಐಎಂ ನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ […]